ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಕೊಂಗವಾಡಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲ : ಗ್ರಾಮಸ್ಥರ ಆಕ್ರೋಶ

ನವಲಗುಂದ : ಕೊಂಗವಾಡ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲಾ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ನವಲಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಕೆಲಕಾಲ ಬಸ್ ತಡೆದು ಆಕ್ರೋಶ ಹೊರ ಹಾಕಿ ಪ್ರತಿಭಟನೆ ನಡೆಸಿದರು.

ಹೌದು... ಕಳೆದ ನಾಲ್ಕೈದು ದಿನಗಳ ಹಿಂದೆಯೂ ಸಹ ನವಲಗುಂದ ತಾಲೂಕಿನ ಕೊಂಗವಾಡ ಗ್ರಾಮಕ್ಕೆ ಬಸ್ ನ ಕೊರತೆ ಇದೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಪ್ರತಿಭಟನೆಯ ಹಾದಿ ಹಿಡಿದಿದ್ದರು. ಈಗ ಮತ್ತೆ ಅದೇ ಪರಿಸ್ಥಿತಿ ಮರುಕಳಿಸಿದೆ. ಅಷ್ಟೇ ಅಲ್ಲದೆ ಬಸ್ ಕೊರತೆ ಬಗ್ಗೆ ಗ್ರಾಮಸ್ಥರು ಈ ಮೊದಲು ಮನವಿ ಸಿಲ್ಲಿಸಿದರೂ ಇದುವರೆಗೂ ಸಮಸ್ಯೆ ಬಗೆ ಹರಿದಿಲ್ಲ.

ನವಲಗುಂದ ಘಟಕ ವ್ಯವಸ್ಥಾಪಕರು ಕೂಡಲೇ ಸಾರ್ವಜನಿಕರ ಸಮಸ್ಯೆ ಗೆ ಸ್ಪಂದಿಸಿ, ಹೆಚ್ಚುವರಿ ಬಸ್ ನ ವ್ಯವಸ್ಥೆ ಮಾಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

Edited By : Shivu K
Kshetra Samachara

Kshetra Samachara

16/07/2022 06:39 pm

Cinque Terre

123.89 K

Cinque Terre

0

ಸಂಬಂಧಿತ ಸುದ್ದಿ