ಧಾರವಾಡ: ಬಗರ್‌ಹುಕುಂ ಸಾಗುವಳಿದಾರರಿಗೆ ಭೂಮಿಯ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ರೈತ ಪ್ರಾಂತ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಲಘಟಗಿ ತಾಲೂಕಿನ ಅನೇಕ ಊರುಗಳಲ್ಲಿ ಖಾಲಿ ಇದ್ದ ಜಾಗವನ್ನು ಅನೇಕ ವರ್ಷಗಳಿಂದ ರೈತರು ಸಾಗುವಳಿ ಮಾಡುತ್ತಿದ್ದಾರೆ. ಹೀಗಾಗಿ ಆ ಜಮೀನಿನ ಹಕ್ಕುಪತ್ರವನ್ನು ಅವರಿಗೆ ನೀಡಬೇಕು ಎಂದು ಈಗಾಗಲೇ ಸರ್ಕಾರಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಅದರಲ್ಲಿ ಬಹುತೇಕ ಅರ್ಜಿಗಳನ್ನು ಸರ್ಕಾರ ತಿರಸ್ಕಾರ ಮಾಡಿದೆ. ಕೂಡಲೇ ಈ ಅರ್ಜಿಗಳನ್ನು ಸರಕಾರ ಪರಿಗಣಿಸಿ ಭೂಮಿಯ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.
Kshetra Samachara
25/07/2022 07:29 pm