ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳ್ನಾವರ: ಆತ್ಮ ನಿರ್ಭರ್ ಸ್ವ ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ

ಅಳ್ನಾವರ: ಅಳ್ನಾವರ ಪಟ್ಟಣ ಪಂಚಾಯಿತಿ ಆವರಣದಲ್ಲಿ 75ನೇ ಆಜಾದ್ ಕಿ ಅಮೃತ್ ಮಹೋತ್ಸವದ ಅಂಗವಾಗಿ ಪ್ರಧಾನ ಮಂತ್ರಿಗಳ ಆತ್ಮ ನಿರ್ಭರ್ ಸ್ವ ನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮೇಳವನ್ನು ಇಂದು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 156 ಜನ ಬೀದಿ ಬದಿ ವ್ಯಾಪಾರಸ್ಥರು ಭಾಗವಹಿಸಿದ್ದರು. 19 ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ ಮಾಡಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ಕಡಕೋಳ, ಉಪಾಧ್ಯಕ್ಷ ನದೀಮ್ ಕಾಂಟ್ರ್ಯಾಕ್ಟರ್, ಸದಸ್ಯರಾದ ಜೈಲಾನಿ ಸುದರ್ಜಿ, ಮುಖ್ಯಾಧಿಕಾರಿ ಪ್ರಭಾಕರ್ ದೊಡಮನಿ ಉಪಸ್ಥಿತರಿದ್ದರು. ಕೆನರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್‌ಗಳ ಅಳ್ನಾವರ ಶಾಖಾ ವ್ಯವಸ್ಥಾಪಕರು ಮೇಳದಲ್ಲಿದ್ದರು.

Edited By : PublicNext Desk
Kshetra Samachara

Kshetra Samachara

06/08/2022 08:37 pm

Cinque Terre

9.75 K

Cinque Terre

0

ಸಂಬಂಧಿತ ಸುದ್ದಿ