ಹುಬ್ಬಳ್ಳಿ: ಸರಿಯಾಗಿ ರಸ್ತೆ ಇಲ್ಲದೆ ಇಲ್ಲಿನ ಜನ ತಮ್ಮ ಮನೆಗೆ ಹೋಗಲು ಪರದಾಡುತ್ತಿದ್ದಾರೆ. ಈ ಸಮಸ್ಯೆ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಹೇಳಿದರು ಕೂಡ ಕ್ಯಾರೆ ಎನ್ನುತ್ತಿಲ್ಲವಂತೆ. ಅದಕ್ಕಾಗಿ ನವಲಗುಂದ ಮತಕ್ಷೇತ್ರದ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರು ಬಂದು ಸುಗಮ ರಸ್ತೆ ಮಾಡಿಕೊಡುತ್ತಾರೆಂದು ನಿರೀಕ್ಷೆಯಲ್ಲಿದ್ದಾರೆ.
ಹೌದು, ಹೀಗೆ ರಸ್ತೆ ದಾಟಲು ಶಾಲಾ ಮಕ್ಕಳು ಮತ್ತು ಅಲ್ಲಿನ ಜನ ಪರದಾಡುತ್ತಿರುವ ದೃಶ್ಯಗಳು ಕಂಡು ಬಂದಿದ್ದು, ಹುಬ್ಬಳ್ಳಿ ತಾಲ್ಲೂಕಿನ ಕುಸಗಲ್ ಗ್ರಾಮದ ವಾರ್ಡ್ ನಂಬರ್ 8 ರಲ್ಲಿ ಬರುವ ಗಂಗಾಧರ ನಗರದಲ್ಲಿ. ಇಲ್ಲಿ ಸುಮಾರು ವರ್ಷಗಳಿಂದ ರಸ್ತೆ ಹದಗೆಟ್ಟು ಹೋಗಿದ್ದರು ಕೂಡ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅಧಿಕಾರಿಗಳು ರಸ್ತೆ ಮಾಡಿ ಕೊಡಲು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ. ಈ ಕಾರಣದಿಂದ ಇಲ್ಲಿನ ಜನರು ಈ ಭಾಗದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರನ್ನು ನಮಗೆ ಸುಗಮ ರಸ್ತೆ ಮಾಡಿಕೊಡಿ ಎಂದು ಕೇಳಿಕೊಳ್ಳುತ್ತಿದ್ದಾರೆ.
ಒಂದು ಚಿಕ್ಕ ಮಳೆ ಆದ್ರೆ ಸಾಕು ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗುತ್ತದೆ. ಬೇಸಿಗೆಯಲ್ಲಿ ಧೂಳಿನ ಸಮಸ್ಯೆಗೆ ಇಲ್ಲಿನ ನಿವಾಸಿಗಳು ಬೇಸತ್ತು ಹೋಗಿದ್ದಾರೆ. ಇನ್ನು ಇಷ್ಟೆಲ್ಲಾ ಸಮಸ್ಯೆ ಇದ್ರು ಸಹ ಗ್ರಾಮ ಪಂಚಾಯತಿ ಪಿಡಿಓ ಮಾತ್ರ ಸಮಸ್ಯೆ ಬಗ್ಗೆ ಹೇಳಿದ್ರೆ ನಾನು ಬೇರೆ ಕಡೆ ಇದೇನಿ ಎಂಬ ಹಾರಿಕೆ ಉತ್ತರ ನೀಡಿ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಕೂಡಲೆ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರು ಈ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕಿದೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ.
Kshetra Samachara
09/08/2022 05:45 pm