ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿನ ಹೆಸ್ಕಾಂನ ಎಲ್ಲಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ ನಿತ್ಯ ಎದುರಾಗುತ್ತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ವಿದ್ಯುತ್ ಗ್ರಾಹಕರ ಹಿತರಕ್ಷಣಾ ವೇದಿಕೆ ವತಿಯಿಂದ, ನಗರದ ಮಿನಿ ವಿಧಾನಸೌಧದ ಆವರಣ ಬಳಿ ಪ್ರತಿಭಟನೆ ನಡೆಸಿ, ನಂತರ ತಹಶೀಲ್ದಾರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಪೋಸ್ಟ್ ಆಫೀಸ್ ಬಳಿಯ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌದದ ವರೆಗೆ ಮೆರವಣಿಗೆ ಮೂಲಕ ಬಂದು, ತಹಶೀಲ್ದಾರ ಅವರ ಮೂಲಕ ಆದಷ್ಟು ಬೇಗ ಸರ್ವರ್ ಸಮಸ್ಯೆ ಬಗೆ ಹರಿಸಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
24/08/2022 02:03 pm