ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ನರೇಗಾ ಯೋಜನೆಯನ್ನು ಸಂಪೂರ್ಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಕೂಲಿಕಾರರೊಂದಿಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನರೇಗಾ ಯೋಜನೆ ಧಾರವಾಡ ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಇದರಿಂದ ಹಲವು ಜನರಿಗೆ ಕೆಲಸವೇ ಸಿಕ್ಕಿಲ್ಲ. ದುಡಿದು ತಿನ್ನುವ ಕೈಗಳಿಗೆ ಆಸರೆಯಾಗಬೇಕಿದ್ದ ಈ ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗದೇ ದುಡಿಯುವ ವರ್ಗ ಕೈಚೆಲ್ಲಿ ಕುಳಿತುಕೊಳ್ಳುವಂತಾಗಿದೆ. ಕೂಡಲೇ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಇಲ್ಲದೇ ಹೋದಲ್ಲಿ ಉಗ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
Kshetra Samachara
21/09/2022 10:14 pm