ಹುಬ್ಬಳ್ಳಿ: ಚರಂಡಿ ಬ್ಲಾಕ್ ಆಗಿ ನೀರೆಲ್ಲ ರಸ್ತೆಯ ಮೇಲೆ ಹರಿಯುತ್ತಿದ್ದರಿಂದ ಜನ ಮತ್ತು ವಾಹನಗಳು ಓಡಾಡಲು ಬರದಂತೆ ವಾತಾವರಣ ನಿರ್ಮಾಣವಾಗಿದೆ. ಆದರೂ ಪಾಲಿಕೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.
ನಗರದ ಹೃದಯ ಭಾಗವಾದ ಹಳೇ ಬಸ್ ನಿಲ್ದಾಣದ ಹತ್ತಿರ ಬರುವ ಬಸವ ವನದ ಪಕ್ಕದ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಚರಂಡಿ ಬ್ಲಾಕ್ ಆಗಿ ನೀರೆಲ್ಲ ರಸ್ತೆ ಮೇಲೆ ಹರಿಯುತ್ತಿದೆ. ಅಷ್ಟೇ ಅಲ್ಲದೆ ದುರ್ವಾಸನೆ ಬರುತ್ತಿರುವುದರಿಂದ ಸಾರ್ವಜನಿಕರು ನರಕಯಾತನೆ ಅನುಭವಿಸುವಂತಾಗಿದೆ. ಹು-ಧಾ ಮಹಾನಗರ ಪಾಲಿಕೆಯ ಸಮೀಪದಲ್ಲೆ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ಕೂಡಲೆ ಸಂಬಧಿಸಿದ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಜನರಿಗೆ ಅನುಕೂಲ ಮಾಡಬೇಕಿದೆ.
Kshetra Samachara
09/10/2022 01:04 pm