ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಬಿಡದೇ ಸುರಿಯುತ್ತಿರುವ ಮಳೆಗೆ ಜನಜೀವನ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದೆ.
ಹೌದು.. ಕಳೆದ ನಾಲ್ಕು ಗಂಟೆಗಳಿಂದ ಬಿಟ್ಟು ಬಿಡದೆ ಸುರಿಯುತ್ತಿವ ಮಳೆರಾಯ ಜನರ ಜೀವನದ ಮೇಲೆ ಬರೆ ಹಾಕುವಂತೆ ತನ್ನ ಆರ್ಭಟ ಮುಂದುವರೆಸಿದ್ದಾನೆ. ವರುಣನ ಆರ್ಭಟಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯೇ ನಲುಗಿದೆ.
ಬಿಡದೇ ಸುರಿಯುತ್ತಿರುವ ಮಳೆಯಿಂದ ಹೊಳೆಯಂತಾದ ರಸ್ತೆಗಳು ಒಂದು ಕಡೆಯಾದರೇ ಮನೆಗೆ ನೀರು ನುಗ್ಗಿ ಮನೆಯೆಲ್ಲ ಹಳ್ಳ ಕೊಳ್ಳದಂತಾಗಿದೆ. ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ನಗರದ ದಾಜೀಬಾನ ಪೇಟೆ, ಕುಂಬಾರ ಓಣಿಯಲ್ಲಿ ಮನೆಗಳಿಗೆ ನುಗ್ಗಿದ ನೀರನ್ನು ಹೊರ ಹಾಕಲು ಜನರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ನೀರಿನಲ್ಲಿಯೇ ಮಕ್ಕಳು, ವಯೋವೃದ್ಧರು ಜೀವನ ಕಳೆಯುತ್ತಿದ್ದಾರೆ.
Kshetra Samachara
10/10/2022 11:03 pm