ನವಲಗುಂದ: ಸೋಮವಾರ ಸಂಜೆಯಿಂದ ರಾತ್ರಿಯವರೆಗೂ ಅಬ್ಬರದ ಮಳೆ ಸುರಿದ ಹಿನ್ನೆಲೆ ಮೊರಬ ಗ್ರಾಮದಲ್ಲಿನ ಹಲವು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು.
ಮೊರಬ ಗ್ರಾಮದ ಅಂಬೇಡ್ಕರ್ ನಗರ ಹಾಗೂ ಎಸ್ ಟಿ ಕಾಲೋನಿಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗುವಂತೆ ಮಾಡಿತ್ತು. ಈ ದುಸ್ಥಿತಿ ಕಳೆದ ನಾಲ್ಕು ವರ್ಷಗಳಿಂದ ಪುನರಾವರ್ತಿಸುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಮನೆ ಸ್ಥಳಾಂತರಕ್ಕೆ ಅಧಿಕಾರಿಗಳಿಗೆ ಮನವಿ ನೀಡಿದ್ದರು.
ಮನವಿ ನೀಡಿದ್ರೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿ, ಎಲ್ಲಾ ಮನೆಗಳಿಗೂ ಸೂಕ್ತ ಜಾಗವನ್ನು ಕಲ್ಪಿಸಿ ಸ್ಥಳಾಂತರ ಮಾಡಬೇಕು ಎಂದು ಪಟ್ಟು ಹಿಡಿದಿದ್ದರು.
Kshetra Samachara
11/10/2022 05:26 pm