ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಳ್ನಾವರ: ರೈತ ಸಂಘದಿಂದ ತಹಶೀಲ್ದಾರ್‌ಗೆ ಮನವಿ

ಅಳ್ನಾವರ: ಕಳೆದೆರಡು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಪರಿಣಾಮ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ನಷ್ಟವುಂಟಾಗಿದ್ದು, ರೈತರಿಗೆ ಸಿಗಬೇಕಾದ ಪರಿಹಾರ ಇನ್ನೂ ಸಿಕ್ಕಿಲ್ಲ. ಆದಷ್ಟು ಬೇಗ ಸರ್ಕಾರ ರೈತರಿಗೆ ಬೆಳೆ ಪರಿಹಾರ ಒದಗಿಸಿಕೊಡಬೇಕು ಹಾಗೂ ಕಬ್ಬಿಗೆ ಸರ್ಕಾರ ನಿಗದಿ ಪಡಿಸಿದ ಯೋಗ್ಯ ಬೆಲೆ ನೀಡಬೇಕು ಎಂದು 'ಕರ್ನಾಟಕ ರಾಜ್ಯ ರೈತ ಸಂಘ'ದಿಂದ ತಹಶೀಲ್ದಾರ್ ಅಮರೇಶ ಪಮ್ಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದ ಪಟ್ಟಣ ಪಂಚಾಯಿತಿ ಎದುರು ರೈತ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ರೈತರ ಪರವಾಗಿ ಸ್ವಲ್ಪ ಸಮಯ ಧರಣಿ ನಡೆಸಿದರು. ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ಅತಿವೃಷ್ಟಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು. ಆದಷ್ಟು ಬೇಗ ಪರಿಹಾರ ಘೋಷಿಸಬೇಕು ಎಂದು ರೈತ ಸಂಘದ ಎಲ್ಲ ಪದಾಧಿಕಾರಿಗಳು ತಹಶೀಲ್ದಾರ್ ಅವರಿಗೆ ಒತ್ತಾಯಿಸಿದರು.

Edited By : PublicNext Desk
Kshetra Samachara

Kshetra Samachara

12/10/2022 09:46 am

Cinque Terre

7.17 K

Cinque Terre

0

ಸಂಬಂಧಿತ ಸುದ್ದಿ