ಹುಬ್ಬಳ್ಳಿ : ಉಕ್ರೇನ್ ನಲ್ಲಿ ರಷ್ಯಾ ಸೇನೆಯ ದಾಳಿಗೆ ಹಾವೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ಸಕಾಲದಲ್ಲಿ ಬಿಜೆಪಿ ಸರ್ಕಾರ ನೆರವಾಗದೇ ಇರುವುದನ್ನು ಖಂಡಿಸಿ, ನಗರದ ಕಿಮ್ಸ್ ಮುಂಭಾಗದಲ್ಲಿಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.
ಉಕ್ರೇನ್ ಯುದ್ಧಕ್ಕೆ ಅಮಾಯಕ ನಾಗರಿಕರು ಬಲಿಯಾಗುತ್ತಿದ್ದು ದುರದೃಷ್ಟಕರ. ಸರ್ಕಾರ ಅಂತರಾಷ್ಟ್ರೀಯ ಸಂಬಂಧಗಳನ್ನು ಬಳಸಿಕೊಂಡು ಯುದ್ಧದಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಪ್ರಯತ್ನಿಸಬೇಕೆಂದು ಆಗ್ರಹಿಸಿದರು.
Kshetra Samachara
02/03/2022 02:03 pm