ಧಾರವಾಡ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಖಾಲಿ ಹುದ್ದೆಗಳ ವರ್ಗೀಕರಣವನ್ನು ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‍ಸೈಟ್ www.recruitment.ksp.gov.in ನಲ್ಲಿನ ಅಧಿಸೂಚನೆಯನ್ನು ಗಮನಿಸಬೇಕು.
ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜ.22 ರಿಂದ ಪ್ರಾರಂಭವಾಗಲಿದ್ದು, ಫೆ.22 ಕೊನೆಯ ದಿನವಾಗಿದೆ. ಅಧಿಕೃತ ಬ್ಯಾಂಕ್ ಶಾಖೆಗಳ, ಅಂಚೆ ಕಚೇರಿಯಲ್ಲಿ ಶುಲ್ಕವನ್ನು ಪಾವತಿಸಲು ಫೆ.24 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.500/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250/- ಶುಲ್ಕ ಪಾವತಿಸಬೇಕು ಎಂದು ಪಿಎಸ್‍ಐ ನೇಮಕಾತಿ ಸಮಿತಿಯ ಅಧ್ಯಕ್ಷರು ಆಗಿರುವ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ರವರು ಅಧಿಸೂಚನೆ ಹೊರಡಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಲಾಬೂರಾಮ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Kshetra Samachara
20/01/2021 10:04 pm