ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುರಿ, ಉಣ್ಣೆ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಧಾರವಾಡ: 2021-22 ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (10+1) ಅಡಿಯಲ್ಲಿ ಆರ್ಥಿಕ ನೆರವು ನೀಡಲು ಧಾರವಾಡ ಜಿಲ್ಲೆಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟೀಯ ಕೃಷಿ ವಿಕಾಸ ಯೋಜನೆಯಡಿ ಪರಿಶಿಷ್ಟ ಜಾತಿ-01 (ನವಲಗುಂದ ತಾಲ್ಲೂಕು ಮಾತ್ರ) ಹಾಗೂ ಸಾಮಾನ್ಯ-06 (ಧಾರವಾಡ-01, ಹುಬ್ಬಳ್ಳಿ-01, ಕುಂದಗೋಳ-01, ಕಲಘಟಗಿ-01 ಹಾಗೂ ನವಲಗುಂದ ತಾಲ್ಲೂಕು-02) ಫಲಾನುಭವಿಗಳಿಗೆ ಕುರಿ, ಆಡು ಸಾಕಾಣಿಕೆಗಾಗಿ ಆಸಕ್ತಿಯುಳ್ಳ ಫಲಾನುಭವಿಗಳು ದಾಖಲೆಗಳೊಂದಿಗೆ ನಿಗದಿತ ನಮೂನೆಯ ಅರ್ಜಿಯನ್ನು ಜನವರಿ 15, 2022 ರೊಳಗಾಗಿ ಸಂಬಂಧಿಸಿದ ತಾಲೂಕಿನ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆಗಳಿಗೆ ಸಲ್ಲಿಸಬಹುದು.

ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರಿ ಸಂಘದ ಸದಸ್ಯರಿಗೆ, ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು. ಕಳೆದ ಐದು ವರ್ಷಗಳಲ್ಲಿ ನಿಗಮದಿಂದ ಫಲಾನುಭವಿಯಾದವರು ಹಾಗೂ ಕುಟುಂಬದವರು ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

20/12/2021 09:27 pm

Cinque Terre

24.59 K

Cinque Terre

0