ಧಾರವಾಡ: ಧಾರವಾಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿಯಾಗಿರುವ ಗೌರವ ಸಮಾದೇಷ್ಟರ ಹುದ್ದೆಗೆ ಕರ್ನಾಟಕ ಗೃಹ ರಕ್ಷಕ ದಳ ನಿಯಮಗಳ ಪ್ರಕಾರ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ್ 24 ರೊಳಗೆ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನವೆಂಬರ್ 18 ರಂದು ಪೊಲೀಸ್ ಮಹಾನಿರ್ದೇಶಕರು ಮತ್ತು ಗೃಹ ರಕ್ಷಕ ದಳದ ಮಹಾಸಮಾದೇಷ್ಟರು ಮತ್ತು ಪೌರ ರಕ್ಷಣೆ ವಿಭಾಗದ ನಿರ್ದೇಶಕರು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ಆಸಕ್ತ ಪದವಿಧರರು ಮತ್ತು ಯಾವುದೇ ರಾಜಕೀಯ ಪಕ್ಷ ಅಥವಾ ಯಾವುದೇ ರಾಜಕೀಯ ಸಂಘಟನೆಯಲ್ಲಿ ಭಾಗಿಯಾಗದ ಮತ್ತು ರಾಜಕೀಯ ಕಾರ್ಯಚಟುವಟಿಕೆಗಳಿಂದ ಹೊರತಾಗಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು. ಯಾವುದೇ ನ್ಯಾಯಾಲಯ ಅಥವಾ ಆಯೋಗದ ತನಿಖೆಗೆ ಮತ್ತು ಶಿಕ್ಷೆಗೆ ಒಳಗಾಗಿರಬಾರದು. ಮತ್ತು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 50 ವರ್ಷ ವಯಸ್ಸು ಮೀರಿರಬಾರದು. ಮತ್ತು ಜಿಲ್ಲಾ ಕೇಂದ್ರದ 20 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿರಬೇಕು. ಮತ್ತು ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ದೈಹಿಕ ಮತ್ತು ವೈದ್ಯಕೀಯ ಸದೃಢತೆಯ ದೃಢೀಕರಣ ಹೊಂದಿರಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲಾ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗೆ ಯಾವುದೇ ವೇತನ ಇರುವುದಿಲ್ಲ. ಇದು ಪೂರ್ಣ ಪ್ರಮಾಣದಲ್ಲಿ ಸ್ವಯಂವಾಗಿ ಸೇವೆ ಸಲ್ಲಿಸುವ ಗೌರವ ಹುದ್ದೆಯಾಗಿದೆ.
ಅರ್ಜಿ ಸಲ್ಲಿಸುವವರು ತಮ್ಮ ಪರಿಚಯ ಪತ್ರದೊಂದಿಗೆ ಜನನ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲಾತಿಗಳು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಇಬ್ಬರು ಸ್ಥಳೀಯ ಗಣ್ಯರ ಶಿಫಾರಸ್ಸಿನೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 24, 2021 ಕೊನೆಯ ದಿನಾಂಕವಾಗಿದೆ. ಆಸಕ್ತರು ಅರ್ಜಿ ಸಲ್ಲಿಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
20/12/2021 09:32 pm