ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳದಲ್ಲಿ ಜ.12 ರಂದು ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ

ಕುಂದಗೋಳ : ಪಟ್ಟಣದಲ್ಲಿ ಜ.12 ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರು ಪೂರ್ವಭಾವಿ ಸಭೆ ಚರ್ಚೆಯನ್ನು ಕುಂದಗೋಳ ತಾಲೂಕಿನ ಕಮಾಂಡೊಳ್ಳಿ ಗ್ರಾಮದ ಲೋಚನೇಶ್ವರ ಮಠದಲ್ಲಿ ನಡೆಸಿದರು.

ಕುಂದಗೋಳ ಪಟ್ಟಣದ ಕಲ್ಯಾಣಪುರ ಬಸವಣ್ಣನವರ ಮಠದಲ್ಲಿ ಇದೇ ಜ.12 ರಂದು ಬುಧವಾರ ಉದ್ಯೋಗ ಮೇಳ ನಡೆಯಲಿದ್ದು, ಹುಬ್ಬಳ್ಳಿ ಧಾರವಾಡ ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಇದರಲ್ಲಿ ಭಾಗವಹಿಸಲಿದ್ದು, ಸುಮಾರು 550 ಕ್ಕೂ ಹೆಚ್ಚು ಯುವಕ ಯುವತಿಯರಿಗೆ ಉದ್ಯೋಗಾವಕಾಶ ಇರಲಿವೆ.

ಆಸಕ್ತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳವಂತೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಬ್ಲಿಕ್ ನೆಕ್ಸ್ಟ್ ಮೂಲಕ ಮನವಿ ಮಾಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

10/01/2022 10:47 pm

Cinque Terre

82.33 K

Cinque Terre

3