ಗದಗ: ಗದಗನಲ್ಲಿ ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿಮಾಡಿ ಭ್ರಷ್ಟ ಅಧಿಕಾರಿಗೆ ಬಿಸಿ ಪೊಲೀಸರು ಮುಟ್ಟಿಸಿದ್ದಾರೆ. ಗದಗ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಅಧಿಕಾರಿ ಎಸ್.ಎನ್ ರುದ್ರೇಶ ಎಂಬ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಭ್ರಷ್ಟ ಅಧಿಕಾರಿಗೆ ಸಂಬಂಧಿಸಿದಂತೆ ಏಕಕಾಲಕ್ಕೆ ೩ ಕಡೆ ದಾಳಿಮಾಡಿದ್ದಾರೆ. ನಗರದ ನೌಕರರ ಭವನ ಬಳಿ ಕ್ವಾಟರ್ಸ್, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಅಧಿಕಾರಿ ಎಸ್.ಎನ್ ರುದ್ರೇಶ ಆದಾಯಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ.
ಆರೋಪಿ ಅಧಿಕಾರಿ ಮನೆಯಿಂದ 400 ಗ್ರಾಮ ಕ್ಕೂ ಅಧಿಕ ಚಿನ್ನಾಭರಣ, ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ. ಅಧಿಕಾರಿಗಳು ಇನ್ನು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ವಾ.ಎಸ್ ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ಇನ್ನು ಗದಗ ಡಿವೈಎಸ್ ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರನ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದೆ. ಒಟ್ಟು ಮೂರು ತಂಡಗಳ ಮೂಲಕ ಮೂರುಕಡೆ ದಾಳಿ ಮಾಡಲಾಗಿದೆ.
Kshetra Samachara
22/10/2020 05:19 pm