ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಅವರ ಕೊಲೆ ತನಿಖೆಯ ತನಿಖಾಧಿಕಾರಿಯಾಗಿದ್ದ ಅಂದಿನ ಉಪನಗರ ಠಾಣೆ ಇನ್ ಸ್ಪೆಕ್ಟರ್ ಚನ್ನಕೇಶವ ಟಿಂಗರಿಕರ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡದ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ವಜಾಗೊಳಿಸಿದೆ.
ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿ ಮಹತ್ವದ ತೀರ್ಪು ಹೊರಡಿಸಿದೆ. ಯೋಗೀಶಗೌಡ ಹತ್ಯೆಯಾದಾಗ ಚನ್ನಕೇಶವ ಟಿಂಗರಿಕರ ಅವರು ಧಾರವಾಡದ ಉಪನಗರ ಠಾಣೆ ಇನ್ ಸ್ಪೆಕ್ಟರ್ ಆಗಿದ್ದರು. ಆಗ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯೂ ಆಗಿದ್ದರು. ಯಾವಾಗ ಈ ಪ್ರಕರಣ ಸಿಬಿಐ ಕೈ ಸೇರಿತೋ ಆಗ ಟಿಂಗರಿಕರ ಅವರು, ಮಾಧ್ಯಮದ ವರದಿಗಳನ್ನು ನೋಡಿ ತಮ್ಮ ಬಂಧನವಾಗಬಹುದು ಎಂಬ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಹಲವು ಬಾರಿ ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡುತ್ತಾ ಬಂದಿತ್ತು. ಆದರೆ, ಇಂದು ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಟಿಂಗರಿಕರ ಅವರು ಸಲ್ಲಿಸಿದ್ದ ಅರ್ಜಿಯನ್ನೇ ವಜಾಗೊಳಿಸಿದೆ.
Kshetra Samachara
29/10/2020 10:43 pm