ಹುಬ್ಬಳ್ಳಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಎರಡು ಬೈಕ್‌ಗಳು ಡಿಕ್ಕಿ ಹೊಡೆದ ಪರಿಣಾಮ ಮೂರು ಜನ ಬೈಕ್ ಸವಾರರು ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ಬೈಪಾಸ್ ಬಳಿಯಲ್ಲಿ ಸಂಭವಿಸಿದೆ.
ಸೆಟ್ಲಿಮೆಂಟ್ ಮೂಲದ ನಾಲ್ಕು ಜನ ಯುವಕರು ತಾರಿಹಾಳದಲ್ಲಿ ಕೆಲಸ ಮುಗಿಸಿಕೊಂಡು ಹುಬ್ಬಳ್ಳಿಯತ್ತ ಬೈಪಾಸ್‌ನಲ್ಲಿ ಬರುತ್ತಿದ್ದಾಗ ಮೆಹಬೂಬ್ ದಾಬಾ ಬಳಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಎರಡು ಬೈಕ್ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟು ಇನ್ನೊಬ್ಬ ಬೈಕ್ ಸವಾರ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಈ ಮೂಲಕ ಅಪಘಾತದಲ್ಲಿ ಮೃತಪ್ಪಟ್ಟವರ ಸಂಖ್ಯೆ ಮೂರಕ್ಕೇರಿದೆ.
ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/08/2022 10:57 am