ಹುಬ್ಬಳ್ಳಿ: ಯೋಗೀಶ್ಗೌಡ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನ ಸಿಬಿಐ ವಶದಲ್ಲಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಹಿನ್ನೆಲೆಯಲ್ಲಿಂದು ಹುಬ್ಬಳ್ಳಿ ಸಿಎಆರ್ ಮೈದಾನದಿಂದ ವಿಶೇಷ ಭದ್ರತೆಯೊಂದಿಗೆ ಹುಬ್ಬಳ್ಳಿಯಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ರವಾನಿಸಲಾಯಿತು.
ಹೌದು. ಇಂದು ನಡೆದ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ಹದಿನಾಲ್ಕು ದಿನದ ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಹೆಚ್ಚಿನ ಭದ್ರತೆ ಮೂಲಕ ಕರೆದುಕೊಂಡು ಹೋಗಲಾಯಿತು.
Kshetra Samachara
09/11/2020 02:35 pm