ಹುಬ್ಬಳ್ಳಿ: ಮಾಜಿ ಸಚಿ ವಿನಯ ಕುಲಕರ್ಣಿಗೆ ನ್ಯಾಯಾಲಯವು ಹದಿನಾಲ್ಕು ದಿನ ನ್ಯಾಯಾಂಗ ಬಂಧನ ನೀಡಿದ್ದು, ಬೆಳಗಾವಿ ಹಿಂಡಲಗಾ ಜೈಲಿಗೆ ರವಾನೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ಕಾನೂನು ಸುವ್ಯವಸ್ಥೆ ಡಿಸಿಪಿ ಪಿ.ಕೃಷ್ಣಕಾಂತ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿಯ ಸಿಎಆರ್ ಮೈದಾನಕ್ಕೆ ಭೇಟಿ ನೀಡಿದ ಪಿ.ಕೃಷ್ಣಕಾಂತ ಭದ್ರತೆ ಪರಿಶೀಲನೆ ಹಾಗೂ ವಿನಯ ಕುಲಕರ್ಣಿ ಕರೆದುಕೊಂಡು ಹೋಗಲು ಸಿದ್ಧಗೊಳಿಸಿದ ವ್ಯವಸ್ಥೆ ಪರಿಶೀಲನೆ ನಡೆಸಿದರು.
Kshetra Samachara
09/11/2020 04:27 pm