ಧಾರವಾಡ: ದೀಪಾವಳಿ ಹಬ್ಬದ ಹಿನ್ನೆಲೆ ಕೊಂಚ ಬಿಡುವು ಪಡೆದುಕೊಂಡಿದ್ದ ಸಿಬಿಐ ಅಧಿಕಾರಿಗಳು ಹಬ್ಬ ಮುಗಿಸಿ ಬಂದು ಮತ್ತೆ ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.
ಇಂದು ಧಾರವಾಡದ ಉಪನಗರ ಪೊಲೀಸ್ ಠಾಣೆಗೆ ಶ್ರೀ ಪಾಟೀಲ, ಬಾಬು ಕಟಗಿ ಹಾಗೂ ಬಸವರಾಜ ಮುತ್ತಗಿ ಅವರನ್ನು ಸಿಬಿಐ ಅಧಿಕಾರಿಗಳು ಕರೆದು ವಿಚಾರಣೆ ನಡೆಸಿದರು.ಈಗಾಗಲೇ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದು, ಇನ್ನೂ ಹಲವು ವಿಷಯಗಳ ಕುರಿತು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ.
ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ಇಂದು ವಿಚಾರಣೆ ನಡೆಯಬೇಕಿತ್ತು. ಆದರೆ, ವಿನಯ್ ಪರ ವಕೀಲರು ಜಾಮೀನು ಅರ್ಜಿಯನ್ನೇ ವಾಪಸ್ ಪಡೆದುಕೊಂಡಿದ್ದು, ಹಲವು ಕೌತುಕಕ್ಕೆ ಕಾರಣವಾಗಿದೆ.
Kshetra Samachara
19/11/2020 09:33 pm