ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಸ್ಕ್ ಧರಿಸಿ: ಇಲ್ಲಾ ಫೈನ್ ಕಟ್ಟಿ

ಧಾರವಾಡ: ಕೋವಿಡ್-19 ಇಳಿಮುಖವಾಗಿದೆ ಎಂದು ಭಾವಿಸಿ ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಸಂಚರಿಸುತ್ತಿದ್ದು, ಅಧಿಕಾರಿಗಳು ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನವನ್ನು ಚುರುಕುಗೊಳಿಸಿ, ಪ್ರತಿದಿನ ತಪ್ಪದೇ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚಿಸಿದರು.

ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ವೀಡಿಯೋ ಸಂವಾದ ಜರುಗಿದ ನಂತರ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕೊರೊನಾ ಹೋಗಿದೆ ಎಂದು ಭಾವಿಸಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಗುಂಪು ಗೂಡುವುದು, ಸಂಚರಿಸುವುದು ಸಾಮಾನ್ಯವಾಗುತ್ತಿದೆ. ಈ ರೀತಿಯ ಭಾವನೆ ಹಾಗೂ ವರ್ತನೆಗಳಿಂದ ನಾವು ಕೊರೊನಾದ ಎರಡನೇ ಅಲೆಗೆ ತುತ್ತಾಗುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಪ್ರತಿದಿನ ಒಂದಲ್ಲಒಂದು ರೀತಿಯಲ್ಲಿ ಸಾರ್ವಜನಿಕರಿಗೆ ಕೊರೊನಾ ಜಾಗೃತಿ, ತಿಳುವಳಿಕೆ ನೀಡಿದರೂ ಕೆಲವರ ಮನೋಭಾವ ಬದಲಾಗದೆ ಉದಾಸೀನತೆ ತೋರುತ್ತಿದ್ದಾರೆ. ಆದ್ದರಿಂದ ಕೊರೊನಾ ಜಾಗೃತಿ ಹಾಗೂ ಮಾಸ್ಕ್ ಅಭಿಯಾನಕ್ಕಾಗಿ ರಚಿಸಿರುವ ಅಧಿಕಾರಿಗಳ ತಂಡ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಂಡು ಪರಿಣಾಮಕಾರಿಯಾಗಿ ಅಭಿಯಾನ ಜಾರಿಗೊಳಿಸಬೇಕು ಎಂದರು.

Edited By : Nagaraj Tulugeri
Kshetra Samachara

Kshetra Samachara

25/11/2020 01:30 pm

Cinque Terre

39.69 K

Cinque Terre

2

ಸಂಬಂಧಿತ ಸುದ್ದಿ