ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದುರ್ಬಲ ವರ್ಗಗಳ ಜಾಗೃತಿ ವಾಹನಕ್ಕೆ ಚಾಲನೆ

ಹುಬ್ಬಳ್ಳಿ: ಸಮಾಜ ಕಲ್ಯಾಣ ಇಲಾಖೆಯಿಂದ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ‌ ರೂಪಿಸಿರುವ ಯೋಜನೆಗಳ ಮಾಹಿತಿವುಳ್ಳ ಜಾಗೃತಿ ವಾಹನಕ್ಕೆ ಹುಬ್ಬಳ್ಳಿ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ, ಧಾರವಾಡ ಸಮಾಜ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ವಾಹನದ ಕಲ್ಪನೆ ರೂಪಿಸಲಾಗಿದೆ.

ವಾಹನವು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಂಚಾರ ಮಾಡಿ ಇಲಾಖೆಯ ಕಾರ್ಯಕ್ರಮಗಳ ಕುರಿತು ಪ್ರಚಾರ ಕಾರ್ಯ ಕೈಗೊಳ್ಳುವುದು.

ಪರಿಶಿಷ್ಟ ಜಾತಿ, ಪಂಗಡ ಹಾಗೂ ದುರ್ಬಲ ವರ್ಗದವರಿಗೆ ಸಂವಿಧಾನಿಕವಾಗಿ ನೀಡಿರುವ ರಕ್ಷಣಾ ಹಕ್ಕುಗಳು, ಸರ್ಕಾರ ರೂಪಿಸಿರುವ ಸಾಮಾಜಿಕ, ಶೈಕ್ಷಣಿಕ ‌ಹಾಗೂ ಆರ್ಥಿಕ ಸಹಾಯಗಳ ಸಂಪೂರ್ಣ ಮಾಹಿತಿಯನ್ನು ಜಾಗೃತಿ ವಾಹನ ಮೂರುಬದಿಯ ಫಲಕಗಳಲ್ಲಿ ಮುದ್ರಿಸಲಾಗಿದೆ.

ಇಲಾಖೆ ಕಾರ್ಯಕ್ರಮಗಳ ಕುರಿತಾದ ಆಡಿಯೋ ಸಂದೇಶವನ್ನು ಧ್ವನಿ ವರ್ಧಕದ ಮೂಲಕ ಸಾರಲಾಗುವುದು. ಹುಬ್ಬಳ್ಳಿ, ಶಿರಗುಪ್ಪಿ ಹಾಗೂ ಛಬ್ಬಿ ಹೋಬಳಿ ಗ್ರಾಮಗಳಲ್ಲಿ ಜಾಗೃತಿ ಸಂಚರಿಸಲಿದೆ.

ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಧೀಶರು ಹಾಗೂ ಕಾರ್ಮಿಕ ನ್ಯಾಯಾಲಯ ಅಧ್ಯಕ್ಷಧಿಕಾರಿ ಶಾಮಪ್ರಸಾದ್ ಹೆಚ್.ಸಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ನಾಗರಾಜಪ್ಪ.ಎ.ಕೆ, ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ದೇವಿಂದ್ರಪ್ಪ ಎನ್ ಬಿರಾದಾರ್, ಪ್ರಧಾನ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಮಾದೇಶ್.ವಿ ವಕೀಲರ ಸಂಘ ಅಧ್ಯಕ್ಷ ಅಶೋಕ ಬಳಿಗಾರ, ಪ್ರಧಾನ ಕಾರ್ಯದರ್ಶಿ ಗುರು ಎಫ್ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ಸಹಾಯ ನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ಮತ್ತಿರರು ಇದ್ದರು.

Edited By : Nirmala Aralikatti
Kshetra Samachara

Kshetra Samachara

25/11/2020 06:49 pm

Cinque Terre

25.08 K

Cinque Terre

1

ಸಂಬಂಧಿತ ಸುದ್ದಿ