ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಿಂಗರಿಕರ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಅವರ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದ ಚನ್ನಕೇಶವ ಟಿಂಗರಿಕರ್‌ಗೆ ಧಾರವಾಡದ ಹೈಕೋರ್ಟ್ ಪೀಠವು ನಿರೀಕ್ಷಣಾ ಜಾಮೀನು ನೀಡಿದೆ.

ಯೋಗೀಶಗೌಡ ಕೊಲೆಯಾದಾಗ ಚನ್ನಕೇಶವ ಟಿಂಗರಿಕರ್ ಉಪನಗರ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದರು. ಅಲ್ಲದೇ ಈ ಕೊಲೆ ಪ್ರಕರಣದ ತನಿಖಾಧಿಕಾರಿಯೂ ಆಗಿದ್ದರು. ಈ ಕೊಲೆ ಪ್ರಕರಣ ಸಿಬಿಐಗೆ ಹಸ್ತಾಂತರಗೊಂಡ ನಂತರ ಟಿಂಗರಿಕರ್ ಮೇಲೆ ಸಾಕ್ಷ್ಯ ನಾಶ ಆರೋಪ ಕೇಳಿ ಬಂದಿತ್ತು. ಇದರಲ್ಲಿ ಸಿಬಿಐ ತಮ್ಮನ್ನು ಬಂಧಿಸಬಹುದು ಎಂದು ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಟಿಂಗರಿಕರ್ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಧಾರವಾಡ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದ್ದರಿಂದ ಟಿಂಗರಿಕರ್ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ಟಿಂಗರಿಕರ್‌ಗೆ ನಿರೀಕ್ಷಣಾ ಜಾಮೀನು ನೀಡಿದೆ.

Edited By : Vijay Kumar
Kshetra Samachara

Kshetra Samachara

30/11/2020 06:15 pm

Cinque Terre

40.92 K

Cinque Terre

0

ಸಂಬಂಧಿತ ಸುದ್ದಿ