ಧಾರವಾಡ: ನವನಗರ ಎಪಿಎಂಸಿ ಪೋಲಿಸ್ ಠಾಣೆ ಇನ್ ಸ್ಪೆಕ್ಟರ್ ಪ್ರಭು ಸೂರಿನ್ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಂಡಿದ್ದನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಬುಧವಾರ ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅರ್ಧ ಗಂಟೆಗೂ ಅಧಿಕ ಹೊತ್ತು ಪ್ರತಿಭಟಿಸಿದ ಪ್ರತಿಭಟನಾಕಾರರು, ವಕೀಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸರು ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಯಾವುದೇ ಕಾರಣಕ್ಕೂ ಶಾಂತಿಗೆ ಭಂಗ ತಂದಿಲ್ಲ. ವಕೀಲ ವಿನೋದ ಪಾಟೀಲ ಪೋಲಿಸ್ ಠಾಣೆ ಇನ್ ಸ್ಪೆಕ್ಟರ್ ಪ್ರಭು ಸೂರಿನ್ ಹಾಗೂ ಅವರ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಕಾನೂನಿನ ಚೌಕಟ್ಟಿನಡಿ ಪ್ರಕರಣ ದಾಖಲಿಸಿ, ಕರ್ತವ್ಯ ನಿರ್ವಹಣೆ ಮಾಡಿದ್ದು, ಹೀಗಾಗಿ ಇನ್ ಸ್ಪೆಕ್ಟರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.
Kshetra Samachara
02/12/2020 01:10 pm