ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ನಡೆಯುವ ಅಕ್ರಮ ಕಟ್ಟಡದ ನಿರ್ಮಾಣದ ಪ್ರಕರಣಗಳಿಗೆ ಬ್ರೇಕ್ ಹಾಕಲು ಮಹಾನಗರ ಪಾಲಿಕೆ ಮುಂದಾಗಿದ್ದು,ಅಕ್ರಮವಾಗಿ ಹಾಗೂ ಅನಧಿಕೃತವಾಗಿ ಕಟ್ಟಡ ನಿರ್ಮಾಣಕ್ಕೆ ಮುಂದಾದರೇ ಕೂಡಲೇ ಅಂತಹ ಪ್ರಕರಣದ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಮಾಹಿತಿ ನೀಡಿದರು.
ನಿಮ್ಮ ಪಬ್ಲಿಕ್ ನೆಕ್ಸ್ಟ್ ಭಿತ್ತರಿಸಿದ 'ವಾಣಿಜ್ಯನಗರಿಯಲ್ಲೊಂದು ಅಕ್ರಮ ಕಟ್ಟಡದ ಪ್ರಕರಣ ಬೆಳಕಿಗೆ:ದಾಜೀಬಾನಪೇಟೆಯಲ್ಲಿ ಭುಗಿಲೆದ್ದ ಆಕ್ರೋಶ' ಎಂಬುವಂತ ವರದಿಗೆ ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆ ಆಯುಕ್ತರು,ದಾಜೀಬಾನ ಪೇಟೆಯ ಮಥುರಾ ಸೆಂಟರ್ ಕಾಂಪ್ಲೆಕ್ಸ್ ನಲ್ಲಿ ನಡೆಯುತ್ತಿರುವ ಕಟ್ಟಡ ಕಾರ್ಯಾಚರಣೆ ಕುರಿತು ಪಬ್ಲಿಕ್ ನೆಕ್ಸ್ಟ್ ನನ್ನ ಗಮನಕ್ಕೆ ತಂದಿದ್ದು,ಈ ಬಗ್ಗೆ ನಾನು ವಲಯ ಕಚೇರಿ 09ರ ಸಹಾಯಕ ಆಯುಕ್ತರಿಗೆ ಪರಿಶೀಲನೆ ನಡೆಸಲು ಸೂಚಿಸಿದ್ದೇನೆ.ಅಲ್ಲಿ ಏನಾದರೂ ಅಕ್ರಮ ಚಟುವಟಿಕೆಗಳು ನಡೆದಿರುವುದು ಸಾಬೀತಾದರೇ ಕೂಡಲೇ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡದಲ್ಲಿ ಎಪ್ಪತ್ತು ಸಾವಿರಕ್ಕೂ ಅಧಿಕ ಅನಧಿಕೃತ ಕಟ್ಟಡಗಳಿದ್ದು,ಯಾರಾದರೂ ದೂರು ನೀಡಿದರೇ ಶೀಘ್ರವಾಗಿ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
Kshetra Samachara
07/12/2020 06:11 pm