ಹುಬ್ಬಳ್ಳಿ:ಹು-ಧಾ ಮಹಾನಗರದಲ್ಲಿ ನಡೆಯುತ್ತಿರುವ ಕ್ರೈಂಗಳಿಗೆ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ಸನ್ನದ್ಧವಾಗಿದ್ದು,ಅವಳಿನಗರದಲ್ಲಿ ಮುಂಬರುವ ದಿನಗಳಲ್ಲಿ ಕ್ರೈಂಗಳ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಲಾಬುರಾಮ್ ನೀಡಿದರು.
ನವನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು,ಅವಳಿನಗರದಲ್ಲಿ ಕ್ರೈಂಗಳ ಪ್ರಮಾಣ ವೃದ್ಧಿಸುತ್ತಿದ್ದು,ಬೈಕ್ ಕಳ್ಳತನ, ಕಾರ ಕಳ್ಳತನ ಸೇರಿದಂತೆ ಸಾರ್ವಜನಿಕ ಆಸ್ತಿ ಹಾನಿ ಪ್ರಕರಣದ ವಿರುದ್ಧ ಸಾಕಷ್ಟು ಕಾರ್ಯಾಚರಣೆ ಮೂಲಕ ಹು-ಧಾ ಮಹಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಲ್ಲದೇ ಮುಂಬರುವ ದಿನಗಳಲ್ಲಿ ಕೂಡ ಕ್ರೈಂಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದರು.
ಹು-ಧಾ ಮಹಾನಗರದಲ್ಲಿ ಸಿಸಿ ಕ್ಯಾಮೆರಾಗಳ ತಾಂತ್ರಿಕ ತೊಂದರೆ ಸರಿಪಡಿಸುವಂತೆ ಮಹಾನಗರ ಪಾಲಿಕೆಗೆ ಸೂಚನೆ ನೀಡಲಾಗಿದೆ. ಅದರಂತೆ ಅವರು ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.ಆದಷ್ಟು ಬೇಗ ಸಿಸಿ ಕ್ಯಾಮೆರಾಗಳ ಕಾರ್ಯಾಚರಣೆ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.
ಈಗಾಗಲೇ ಅಕ್ರಮ ಬಡ್ಡಿ ದಂಧೆ ಹಾಗೂ ಪುಡಿರೌಡಿಗಳ ಹಾವಳಿ ವಿರುದ್ಧ ಕೆಲವೊಂದು ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದೇವೆ ಮಹಾನಗರದ ಶಾಂತಿಗೆ ದಕ್ಕೆ ತರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದ ಅವರು,ಸಾರ್ವಜನಿಕರು ಯಾರು ಕೂಡ ಭಯಪಡುವ ಅಗತ್ಯವಿಲ್ಲ ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು,ಯಾರಿಗಾದರೂ ತೊಂದರೆಯಾದಲ್ಲಿ ಹು-ಧಾ ಕಮೀಷನರೇಟ್ ಸಂಪರ್ಕಿಸಲು ಮನವಿ ಮಾಡಿದರು.
Kshetra Samachara
09/12/2020 07:03 pm