ಧಾರವಾಡ: ಯೋಗೀಶಗೌಡ ಗೌಡರ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಸಿಬಿಐ ಅಧಿಕಾರಿಗಳು ಉಪನಗರ ಠಾಣೆಗೆ ಬಂದಿರಲಿಲ್ಲ. ಇಂದು ಮತ್ತೆ ಠಾಣೆಗೆ ಬಂದ ಅಧಿಕಾರಿಗಳು ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಹಾಗೂ ಶ್ರೀ ಪಾಟೀಲ ಅವರನ್ನು ವಿಚಾರಣೆಗೆ ಕರೆದಿದ್ದಾರೆ.
ಸಿಬಿಐ ಸೂಚನೆ ಹಿನ್ನೆಲೆಯಲ್ಲಿ ಬಸವರಾಜ ಮುತ್ತಗಿ ಹಾಗೂ ಶ್ರೀ ಪಾಟೀಲ ಉಪನಗರ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ನು ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಕೂಡ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
Kshetra Samachara
10/12/2020 12:22 pm