ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.
ಹೌದು! ಕೊಲೆ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಜಾಮೀನು ಕೋರಿ ವಿನಯ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡದ ಸಿಬಿಐ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಕಳೆದ ಒಂದೂವರೆ ತಿಂಗಳಿನಿಂದ ವಿನಯ್ ಅವರು ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದು, ತಮಗೆ ಜಾಮೀನು ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ, ಅವರ ನಿರೀಕ್ಷೆಯನ್ನು ಸುಳ್ಳು ಮಾಡಿ ಜಾಮೀನು ಅರ್ಜಿಯನ್ನೇ ವಜಾಗೊಳಿಸಿದೆ.
ಹೀಗಾಗಿ ವಿನಯ್ ಅವರು ಇನ್ನು ಜಾಮೀನು ಕೋರಿ ಹೈಕೋರ್ಟ ಮೆಟ್ಟಿಲೇರಬೇಕಾದ ಅನಿವಾರ್ಯತೆ ಎದುರಾದಂತಾಗಿದೆ.
Kshetra Samachara
14/12/2020 04:42 pm