ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ 8,539 ಚಾಲ್ತಿ, 41 ವ್ಯಾಜ್ಯಪೂರ್ವ ಪ್ರಕರಣಗಳ ಇತ್ಯರ್ಥ

ಧಾರವಾಡ: ಇಂದು ಇ-ಲೋಕ್ ಅದಾಲತ್ ಅನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು.

ಇ-ಲೋಕ ಅದಾಲತ್‍ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಉಮೇಶ್ ಎಮ್.ಅಡಿಗ ಅವರ ಮಾರ್ಗದರ್ಶನದಲ್ಲಿ ಧಾರವಾಡದಲ್ಲಿ 13 ಪೀಠಗಳನ್ನು, ಹುಬ್ಬಳ್ಳಿಯಲ್ಲಿ 16 ಪೀಠಗಳನ್ನು, ಕುಂದಗೋಳ, ನವಲಗುಂದದಲ್ಲಿ ತಲಾ 2 ಮತ್ತು ಕಲಘಟಗಿಯಲ್ಲಿ 1 ಪೀಠವನ್ನು ಒಟ್ಟು 34 ಪೀಠಗಳನ್ನು ಸ್ಥಾಪಿಸಲಾಗಿತ್ತು. ವಿವಿಧ ರೀತಿಯ ಸುಮಾರು 14,344ಕ್ಕಿಂತ ಹೆಚ್ಚು ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 8,539 ಚಾಲ್ತಿ ಇರುವ ಪ್ರಕರಣಗಳನ್ನು ಹಾಗೂ 41 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಯಿತು.

ಸುಮಾರು 20 ಕೋಟಿಗಿಂತ ಹೆಚ್ಚು ಮೊತ್ತವನ್ನು ವಸೂಲು ಮಾಡಲಾಯಿತು. ಈ ಲೋಕ ಅದಾಲತ್‍ನಲ್ಲಿ ಧಾರವಾಡ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪೆನಿಯ ಅಧಿಕಾರಿಗಳು, ವಿಮೆ ಕಂಪನಿಯ ಪ್ಯಾನಲ್ ವಕೀಲರುಗಳು, ಎನ್.ಡಬ್ಲೂ.ಕೆ.ಆರ್.ಟಿ.ಸಿ. ಅಧಿಕಾರಿಗಳು, ಅರ್ಜಿದಾರರ ಪರ ವಕೀಲರುಗಳು, ಕಕ್ಷಿದಾರರು ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಭಾಗವಹಿಸಿ ಮೆಗಾ ಇ-ಲೋಕ ಅದಾಲತ್‍ನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಿಣ್ಣನ್ನವರ್ ಆರ್.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

19/12/2020 06:51 pm

Cinque Terre

36.05 K

Cinque Terre

0

ಸಂಬಂಧಿತ ಸುದ್ದಿ