ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿಲ್ಲ ಹೊಸ ವರ್ಷಾಚರಣೆ

ಧಾರವಾಡ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೊಡ್ಡಮಟ್ಟದಲ್ಲಿ ಜನ ಸೇರಬಾರದು ಹಾಗೂ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡಬಾರದು ಎಂದು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ.

ಧಾರವಾಡದಲ್ಲಿ ನೈಟ್ ಕರ್ಫ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಯಾರೂ ಕೂಡ ಸಂಭ್ರಮದ ಹೊಸ ವರ್ಷಾಚರಣೆಗೆ ಮುಂದಾಗಿಲ್ಲ. ರಾತ್ರಿ 9ಕ್ಕೆ ನಗರದ ಎಲ್ಲ ಅಂಗಡಿ, ಮುಂಗಟ್ಟುಗಳು ಸಂಪೂರ್ಣ ಬಂದ್ ಮಾಡಲಾಯಿತು. ಪೊಲೀಸರು ಗಸ್ತು ತಿರುಗಿ, ಜನ ಸಂಚಾರಕ್ಕೆ ನಿರ್ಬಂಧ ಹೇರಿದರು.

ಒಟ್ಟಾರೆಯಾಗಿ ಕೊರೊನಾ ವೈರಸ್‌ನ ರೂಪಾಂತರಿಯಾಗಿರುವ ಓಮಿಕ್ರಾನ್ ಹತ್ತಿಕ್ಕುವ ಸಲುವಾಗಿ ರಾಜ್ಯ ಸರ್ಕಾರ ಹೊರಡಿಸಿರುವ ನೈಟ್ ಕರ್ಫ್ಯೂಗೆ ಉತ್ತಮ ಬೆಂಬಲ ವ್ಯಕ್ತಪಡಿಸಿದ್ದು, ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿ ಹೊಸ ವರ್ಷಾಚರಣೆ ಮಾಡುವಂತಾಯಿತು.

Edited By : Shivu K
Kshetra Samachara

Kshetra Samachara

01/01/2022 09:24 am

Cinque Terre

44.91 K

Cinque Terre

2

ಸಂಬಂಧಿತ ಸುದ್ದಿ