ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಭಾನುವಾರವೂ ಕರ್ಫ್ಯೂಗೆ ಉತ್ತಮ ಜನಬೆಂಬಲ

ಧಾರವಾಡ: ವೀಕೆಂಡ್ ಕರ್ಫ್ಯೂನ ಎರಡನೇ ದಿನವಾದ ಭಾನುವಾರವೂ ಧಾರವಾಡದಲ್ಲಿ ಉತ್ತಮ ಜನ ಬೆಂಬಲ ವ್ಯಕ್ತವಾಗಿದೆ.

ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ಸುಭಾಷ ರಸ್ತೆ, ಜ್ಯುಬಿಲಿ ವೃತ್ತ, ಹಳೇ ಬಸ್ ನಿಲ್ದಾಣದ ವೃತ್ತ ಜನರಿಲ್ಲದೆ ಬಿಕೋ ಎನ್ನುತ್ತಿವೆ. ಹಾಲು, ಬೇಕರಿ, ಮಾಂಸ, ತರಕಾರಿ, ದಿನಸಿ ಅಂಗಡಿಗಳಿಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಮಾಡಿಕೊಡಲಾಗಿದೆ. ಇನ್ನು ಹೋಟೆಲ್‌ಗಳು ಕೇವಲ ಪಾರ್ಸೆಲ್ ಮಾತ್ರ ನೀಡಲು ಅವಕಾಶ ಮಾಡಿಕೊಡಲಾಗಿದ್ದು, ಗ್ರಾಹಕರಿಲ್ಲದೇ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.

ಇನ್ನು ಪ್ರಯಾಣಿಕರಿಗಾಗಿ ಬಸ್ಸುಗಳ ಸಂಚಾರಕ್ಕೂ ಅನುವು ಮಾಡಿಕೊಡಲಾಗಿದ್ದು, ಪ್ರಯಾಣಿಕರೇ ಇಲ್ಲದೇ ಬಸ್ಸುಗಳು ಖಾಲಿ ಖಾಲಿಯಾಗಿ ಓಡಾಡುತ್ತಿವೆ.

ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಕೂಡ ಗಸ್ತು ತಿರುಗಿ ಅನಾವಶ್ಯಕವಾಗಿ ಓಡಾಡುತ್ತಿರುವ ಸಾರ್ವಜನಿಕರನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ ಕರ್ಫ್ಯೂನ ಎರಡನೇ ದಿನವಾದ ಭಾನುವಾರ ಧಾರವಾಡದಲ್ಲಿ ಉತ್ತಮ ಜನಬೆಂಬಲ ವ್ಯಕ್ತವಾಗಿದೆ.

Edited By : Shivu K
Kshetra Samachara

Kshetra Samachara

09/01/2022 10:57 am

Cinque Terre

24.84 K

Cinque Terre

2

ಸಂಬಂಧಿತ ಸುದ್ದಿ