ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಪ್ರಕರಣ: ದಾಖಲಾದ ದೂರುಗಳೆಷ್ಟು ಗೊತ್ತಾ?

ಧಾರವಾಡ: ಎನ್​ಡಿಪಿಎಸ್ ಕಾಯ್ದೆ ಅಡಿ ಗಾಂಜಾ ವ್ಯವಹಾರ ನಡೆಸುತ್ತಿದ್ದವರ ಮೇಲೆ ದಾಳಿ‌ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್​ ತಿಳಿಸಿದ್ದಾರೆ.

ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಹಸಿ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯನ್ನು ಬಂಧಿಸಲಾಗಿದೆ. ಬಳಿಕ ನರೇಂದ್ರ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಿಸಲು ಯತ್ನಿಸಿದ ಮತ್ತೊಬ್ಬನನ್ನು ‌ಬಂಧಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಮೀಣ ಭಾಗದ ಪೊಲೀಸ್ ಠಾಣೆಗಳಲ್ಲಿ 18 ಪ್ರಕರಣಗಳನ್ನು ದಾಖಲಿಸಿಕೊಂಡು 30 ಕೆಜಿ ಗಾಂಜಾ ಸೀಜ್ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಜಿಲ್ಲೆಯಲ್ಲಿ ಗಾಂಜಾ ಪ್ರಕಣಗಳು ಹೆಚ್ಚು ಬೆಳಕಿಗೆ ಬರುತ್ತಿದ್ದು, ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

Edited By :
Kshetra Samachara

Kshetra Samachara

23/09/2020 07:17 pm

Cinque Terre

22.4 K

Cinque Terre

0

ಸಂಬಂಧಿತ ಸುದ್ದಿ