ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗದಗ ರಸ್ತೆಯಲ್ಲಿ ಟ್ರ್ಯಾಕ್ಟರ್ ಹರಿದು ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಚಲಿಸುತ್ತಿದ್ದ ಟ್ರ್ಯಾಕ್ಟರ್‌ನಿಂದ ವ್ಯಕ್ತಿಯೊಬ್ಬ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಆತನ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗದಗ ರಸ್ತೆಯಲ್ಲಿ ನಡೆದಿದೆ.

ಗದಗ ರಸ್ತೆಯಲ್ಲಿ ನಡೆಯುತ್ತಿದ್ದ ಕಟ್ಟಡ ಕಾಮಗಾರಿಗೆ ನೀರನ್ನು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್‌ನಲ್ಲಿ ಕುಳಿತಿದ್ದ ಓರ್ವ ವ್ಯಕ್ತಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಟ್ರ್ಯಾಕ್ಟರ್ ಚಕ್ರದಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಪಘಾತ ಆಗುತ್ತಿದ್ದಂತೆ ಚಾಲಕ ಸ್ಥಳದಲ್ಲೇ ಟ್ರ್ಯಾಕ್ಟರ್ ಬಿಟ್ಟು ಪರಾರಿಯಾಗಿದ್ದು, ಸ್ಥಳಕ್ಕೆ ಪೂರ್ವ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಶವವನ್ನು ಕಿಮ್ಸ್ ಶವಾಗಾರಕ್ಕೆ ರವಾನಿಸಿದ್ದಾರೆ. ಟ್ರ್ಯಾಕ್ಟರ್ ವಶಕ್ಕೆ ಪಡೆದು ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು ಮೃತಪಟ್ಟ ವ್ಯಕ್ತಿಯ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

Edited By :
Kshetra Samachara

Kshetra Samachara

22/08/2022 05:59 pm

Cinque Terre

21.72 K

Cinque Terre

1

ಸಂಬಂಧಿತ ಸುದ್ದಿ