ನವಲಗುಂದ : ಸಂವಿಧಾನ ಸಮರ್ಪಣಾ ದಿನದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ರೋಟರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಇನ್ನು ಪ್ರತಿಜ್ಞಾವಿಧಿಯಲ್ಲಿ ಭಾರತದ ಜನತೆಯಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುದಕ್ಕಾಗಿ ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯ ಬಗ್ಗೆ ಬೋಧಿಸಲಾಯಿತು.
Kshetra Samachara
26/11/2021 01:55 pm