ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ತರಗತಿ ಪ್ರವೇಶಕ್ಕೂ ಮುನ್ನ ಹಿಜಾಬ್ ತೆಗೆದಿಡಿ; ಡಿಸಿ ಮಹತ್ವದ ಸೂಚನೆ

ಧಾರವಾಡ: ಸಮವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿರುವ ಶಾಲೆ, ಕಾಲೇಜುಗಳಲ್ಲಿ ಗೇಟಿನ ಹೊರಗೆ ವಿದ್ಯಾರ್ಥಿನಿಯರನ್ನು ತಡೆದು ಹಿಜಾಬ್ ತೆಗೆಸಬಾರದು. ಆದರೆ ಆವರಣ ಪ್ರವೇಶಿಸಿದ ಬಳಿಕ ತರಗತಿಗಳಿಗೆ ತೆರಳುವ ಮುನ್ನ ಹಿಜಾಬ್ ತೆಗೆದು ವರ್ಗಕೋಣೆಗಳನ್ನು ಪ್ರವೇಶಿಸಲು ಅವಕಾಶವಿದೆ. ಧಾರವಾಡ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳ ಮುಖ್ಯೋಪಾಧ್ಯಾಯರು, ಪ್ರಾಚಾರ್ಯರು ಈ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ, ವಿದ್ಯಾರ್ಥಿಗಳ ಪಾಠ, ಪ್ರವಚನಗಳಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಶಾಲೆ, ಕಾಲೇಜುಗಳ ಆವರಣಕ್ಕೆ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಹೊರತುಪಡಿಸಿ ಇತರೆ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು. ಪಾಲಕರು ಊಟ, ಉಪಹಾರ ತಂದು ಕೊಡಲು ಬಂದರೆ ಗೇಟಿನ ಬಳಿಯೇ ಸ್ವೀಕರಿಸುವ ವ್ಯವಸ್ಥೆ ಮಾಡಬೇಕು. ಯಾವುದೇ ಕಾರಣಕ್ಕೂ ಅನ್ಯ ವ್ಯಕ್ತಿಗಳಿಗೆ ಶಾಲೆ, ಕಾಲೇಜು ಆವರಣಕ್ಕೆ ಪ್ರವೇಶಿಸಲು ಅವಕಾಶ ನೀಡಬಾರದು. ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ-ಕಾಲೇಜುಗಳ ಮುಖ್ಯೋಪಾಧ್ಯಾಯರು, ಪ್ರಾಚಾರ್ಯರು ಈ ನಿರ್ದೇಶನವನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

17/02/2022 07:42 pm

Cinque Terre

26.05 K

Cinque Terre

26

ಸಂಬಂಧಿತ ಸುದ್ದಿ