ಹುಬ್ಬಳ್ಳಿ : ಹುಬ್ಬಳ್ಳಿಯ ಜೆಸಿ ನಗರದಲ್ಲಿರುವ ವುಮೆನ್ಸ್ ಕಾಲೇಜ್ ನಲ್ಲಿ ಆರಂಭವಾದ ಹಿಜಾಬ್ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಸದ್ಯ ಕಾಲೇಜಿಗೆ ಭೇಟಿ ಕೊಟ್ಟ ಪೊಲೀಸ್ ಕಮೀಷನರ್ ಲಾಬುರಾಮ ಕಾಲೇಜಿನ ಸುತ್ತ ಸೆಕ್ಷನ್ 144 ಜಾರಿ ಮಾಡಿದ್ದಾರೆ.
ಕಾಲೇಜು ಆಡಳಿತ ಮಂಡಳಿ ಒಂದು ದಿನ ರಜೆ ಘೋಷಣೆ ಮಾಡಿದ್ದ ಹಿನ್ನೆಲೆಯಲ್ಲಿ, ಪೊಲೀಸ್ ಕಮೀಷನರ್ ಕಾಲೇಜಿಗೆ ಭೇಟಿ ನೀಡಿ ಬಿಗಿ ಬಂದು ಬಸ್ತ್ ಮಾಡಿದ್ದಾರೆ.
ಬಳಿಕ ಕಾಲೇಜು ಆಡಳಿತ ಮಂಡಳಿ ಜೊತೆ ಮಾತನಾಡಿದ ಕಮೀಷನರ್ ಹೊರಗೆ ನಿಂತ ಮುಸ್ಲಿಂ ಯುವಕರನ್ನು ಮನೆಗೆ ಕಳಿಸುವ ಮೂಲಕ ವಾತಾವರಣವನ್ನು ಶಾಂತಗೊಳಿಸಿದ್ದಾರೆ.
Kshetra Samachara
16/02/2022 01:29 pm