ಹುಬ್ಬಳ್ಳಿ: ಕಾನೂನು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ತೀವ್ರ ಸ್ವರೂಪ ಪಡೆದುಕೊಂಡಿದೆ. ಸರ್ಕಾರ ಹಾಗೂ ಕಾನೂನು ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದು, ಸಚಿವರ ಹಾಗೂ ಕುಲಪತಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡ್ಸಿದ್ದಾರೆ. ಹುಬ್ಬಳ್ಳಿಯ ನವನಗರದ ಕಾನೂನು ವಿವಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾನೂನು ಸಚಿವ ಮಾಧುಸ್ವಾಮಿ ಹಾಗೂ ಕುಲಪತಿ ಈಶ್ವರ್ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ.
Kshetra Samachara
09/12/2021 12:26 pm