ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹುಸಿ ಬಾಂಬ್ ಕರೆಗೆ ಖಾಕಿ ಪಡೆ ಹೈ ಅಲರ್ಟ್: ಪಿಯು ಪರೀಕ್ಷಾ ಕೇಂದ್ರದಲ್ಲಿ ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿಯ ದ್ವಿತೀಯ ಪಿಯು ಪರೀಕ್ಷಾ ಕೇಂದ್ರಕ್ಕೆ ಡಾಗ್, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಲ ದಿನದ ಹಿಂದೆ ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೂ ಖಾಕಿ ಪಡೆ ಅಲರ್ಟ್ ಆಗಿದೆ. ಮಹೇಶ ಪಿಯು ಕಾಲೇಜಿನಲ್ಲಿ ತಪಾಸಣೆ ನಡೆಸುತ್ತಿರುವ ಖಾಕಿ ಪಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತಿದೆ.

ಇನ್ನೂ ಇದೇ ಕೇಂದ್ರದಲ್ಲಿ ಹಳೇ ಹುಬ್ಬಳ್ಳಿ ಗಲಭೆಯ ರೂವಾರಿ ಎನ್ನಲಾಗಿರುವ ಅಭಿಷೇಕ್ ಹಿರೇಮಠ ಪರೀಕ್ಷೆ ಬರೆಯಲಿದ್ದಾನೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

Edited By : Manjunath H D
Kshetra Samachara

Kshetra Samachara

25/04/2022 10:28 am

Cinque Terre

59.82 K

Cinque Terre

1

ಸಂಬಂಧಿತ ಸುದ್ದಿ