ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೊಲೀಸ್ ಇನ್ಸ್ ಪೆಕ್ಟರ್ ಅಮಾನತಿಗೆ ಆಗ್ರಹ; ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿರುವ ಸಿಬ್ಬಂದಿ ವಸತಿಗೃಹಗಳಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣದ ಕುರಿತು ಪ್ರಶ್ನಿಸಿದ ವ್ಯಕ್ತಿಯ ಜೊತೆಗೆ ಪೊಲೀಸ್ ಅಧಿಕಾರಿಗಳು ಅನುಚಿತವಾಗಿ ವರ್ತಿಸಿರುವುದನ್ನು ವಿರೋಧಿಸಿ ಹಾಗೂ ಕೂಡಲೇ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಆರ್.ಎಸ್.ಎಸ್. ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಾಗೂ ಮುಖಂಡರು ಹುಬ್ಬಳ್ಳಿಯ ವಿದ್ಯಾನಗರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ನಿನ್ನೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಕೋರಿದ ಮಲ್ಲಿಕಾರ್ಜುನ ಎಂಬುವಂತ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಸರಿಯಲ್ಲ. ಸಾರ್ವಜನಿಕರೊಂದಿಗೆ ಪೊಲೀಸರು ಸೌಜನ್ಯವಾಗಿ ವರ್ತಿಸಬೇಕು. ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮಾತ್ರವಲ್ಲದೆ, ಆರೋಪಿಗಳ ರೀತಿಯಲ್ಲಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಏಕಾಏಕಿ ಹಲ್ಲೆ ಮಾಡಿರುವುದು ಖಂಡನೀಯ. ಕೂಡಲೇ ಅಂತಹ ಪೊಲೀಸ್ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.

ವಿದ್ಯಾನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಮಹಾಂತೇಶ ಹೊಳಿಯವರ ದರ್ಪ ಹೆಚ್ಚಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ. ಅಲ್ಲದೆ, ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

Edited By :
Kshetra Samachara

Kshetra Samachara

14/06/2022 07:56 pm

Cinque Terre

44.82 K

Cinque Terre

11

ಸಂಬಂಧಿತ ಸುದ್ದಿ