ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಪರೋಕ್ಷವಾಗಿ ಗ್ರೀನ್ ಸಿಗ್ನಲ್ ನೀಡಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಡ್ಡಿಯಾಗಿದ್ದ ವಿಘ್ನ ದೂರವಾದಂತಾಗಿದೆ.
ಹೌದು...ನಿನ್ನೆಯಷ್ಟೆ ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ಪರಿಶೀಲನೆ ನಡೆಸಿದ ಬೆಂಗಳೂರು ಹೈಕೋರ್ಟ್ ಪೀಠದಿಂದ ಮಹತ್ವದ ತೀರ್ಪು ನೀಡಿದೆ. ಗಣೇಶೋತ್ಸವ ಪ್ರತಿಷ್ಠಾಪನೆಗೆ ಅರ್ಜಿ ನಿರ್ಧಾರಿಸುವ ಅಧಿಕಾರ ಹುಬ್ಬಳ್ಳಿ-ಧಾರವಾಡ ಮಹಾನಗರ ಕಮಿಷನರ್ ನೀಡಿದೆ. ಇದೆಲ್ಲದೇ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುವ ಹಕ್ಕು ಪಾಲಿಕೆ ಕಮೀಷನರ್ ಹೆಗಲಿಗೆ ಹೊರಿಸಿದ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಈ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕವಿದಿದ್ದ ಮೋಡ ಸರಿದಂತಾಗಿದ್ದು, ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ಮತ್ತೊಂದು ಜಯ ಸಿಕ್ಕಂತಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/08/2022 07:01 pm