ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಸೂಕ್ತ ಕ್ರಮಗಳನ್ನು ಜರುಗಿಸಿದರೂ ಕೂಡ ಪ್ಲಾಸ್ಟಿಕ್ ಬಳಕೆ ಮಾತ್ರ ಕಡಿಮೆಯಾಗುತ್ತಿಲ್ಲ.ಅಲ್ಲದೇ ನಿಷೇಧಿತ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಹಾನಿಯಾಗುತ್ತಿದ್ದರೂ ಕೂಡ ಪ್ಲಾಸ್ಟಿಕ್ ಬಳಕೆ ಮಾತ್ರ ಕಡಿಮೆಯಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ಅಂಗಡಿ ಮುಂಗಟ್ಟುಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಹೌದು..ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರುತ್ತಿದೆ.ಅಲ್ಲದೇ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕೂಡ ಮಿಶ್ರ ತ್ಯಾಜ್ಯ ಹೆಚ್ಚಾಗುತ್ತಿದೆ.ಈ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ,ಬೇಕರಿಗಳ ಮೇಲೆ ದಾಳಿ ಮಾಡಿ ಸುಮಾರು 70 ಕೆಜಿ ಪ್ಲಾಸ್ಟಿಕ್ ವಶಕ್ಕೆ ಪಡೆದಿದ್ದಾರೆ.
ಸುಮಾರು 70 ಕೆಜಿ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದ ಅಧಿಕಾರಿಗಳು 65,500 ದಂಡ ವಿಧಿಸಿ ನೋಟಿಸ್ ನೀಡಿದ್ದಾರೆ.
Kshetra Samachara
21/01/2021 05:54 pm