ಹುಬ್ಬಳ್ಳಿ: ಮತಾಂತರ ನಿಷೇಧ ಕಾಯಿದೆ ಸಂವಿಧಾನ ವಿರೋಧಿಯಾಗಿದ್ದು, ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಮತ್ತು ಚರ್ಚ್ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ ಸಮತಾ ಸೈನಿಕ ದಳದ ವತಿಯಿಂದ ತಹಶೀಲ್ದಾರ್ ಮನವಿ ಸಲ್ಲಿಸಿದರು.
ರಾಷ್ಟ್ರಕ್ಕೆ ಸಂವಿಧಾನವೇ ಬದುಕಿನ ಧರ್ಮ. ಇಲ್ಲಿ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ಕೇವಲ ಹಕ್ಕಿಗಾಗಿ ಮಾತ್ರವಲ್ಲದೆ ಬಾಧ್ಯತೆಯ ಕರ್ತವ್ಯವಾಗಿ ನೀಡಲಾಗಿದೆ. ಹಕ್ಕು ಮತ್ತು ಕರ್ತವ್ಯಗಳು ಸ್ವಾತಂತ್ರ್ಯ ಎಂದು ಅಲ್ಲದೆ ಒಂದೇ ನಾಣ್ಯದ ಎರಡು ಮುಖಗಳು. ಈ ನಿಟ್ಟಿನಲ್ಲಿ ಮತಾಂತರ ನಿಷೇಧ ಕಾಯಿದೆ ವ್ಯಕ್ತಿ ಸ್ವಾತಂತ್ರ್ಯದ ಮೇಲೆ ಬರೆ ಎಳೆಯುವಂತ ನಿರ್ಧಾರಗಳಾಗಿವೆ. ಈ ನಿಟ್ಟಿನಲ್ಲಿ ಕೂಡಲೇ ಸಂವಿಧಾನ ವಿರೋಧಿ ಕಾಯಿದೆ ಜಾರಿಗೊಳಿಸುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಇನ್ನೂ ಚರ್ಚ್ ಗಳ ಮೇಲಿನ ದಬ್ಬಾಳಿಕೆಯನ್ನು ವಿರೋಧಿಸಿ ಸೂಕ್ತ ಭದ್ರತೆ ನೀಡುವಂತೆ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
Kshetra Samachara
15/11/2021 12:41 pm