ಧಾರವಾಡ: ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮ ಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಆದ್ದರಿಂದ ಡಿ.25 ರ ಮದ್ಯರಾತ್ರಿ 11-59 ರಿಂದ ಡಿ.27 ರ ಮದ್ಯರಾತ್ರಿ 11-59 ರವರೆಗೆ ಮತದಾನ ಜರುಗಲಿರುವ ಒಟ್ಟು 15 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮದ್ಯದ ಅಂಗಡಿ, ಬಾರ್‌ಗಳನ್ನು ಬಂದ್ ಮಾಡಲು ಮತ್ತು ಎಲ್ಲ ರೀತಿಯ ಮದ್ಯ ತಯಾರಿಕಾ ಘಟಕಗಳು, ಮದ್ಯಸಾಗಾಣೆ, ಸಂಗ್ರಹಣೆಯನ್ನು ನಿಷೇಧಿಸಿ ಹಾಗೂ ಮಾರಾಟ ಮಳಿಗೆಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರತಿನಿಧಿ ಕಾಯ್ದೆ 1951 ಕಲಂ 135 (ಸಿ) ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಈ ಆದೇಶ ಹೊರಡಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಉಪ ಅಧೀಕ್ಷಕರು ಹಾಗೂ ವಿಚಕ್ಷಕದಳದ ಅಧಿಕಾರಿಗಳು ಈ ಆದೇಶ ಜಾರಿಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
Kshetra Samachara
22/12/2021 06:31 pm