ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಭಾಪತಿ ಹೊರಟ್ಟಿ ಮೇಲೆ ಎಫ್‌ಐಆರ್: ಇನ್‌ಸ್ಪೆಕ್ಟರ್ ಅಮಾನತ್ತು

ಧಾರವಾಡ: ಸರ್ವೋದಯ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆಗಿದ್ದ ಶ್ರೀಧರ ಸತಾರೆ ಅವರನ್ನು ಇದೀಗ ಅಮಾನತ್ತು ಮಾಡಲಾಗಿದೆ.

ಜ.25 ರಂದು ಸಭಾಪತಿ ಹೊರಟ್ಟಿ ಅವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ವಾಲ್ಮೀಕಿ ಮಹಾಸಭಾ ನಡುವೆ ವಿವಾದ ನಡೆದಿತ್ತು. ಇದೇ ಹಿನ್ನೆಲೆಯಲ್ಲಿ ಮುಗದ ಗ್ರಾಮದಲ್ಲಿ ಗಲಾಟೆ ಕೂಡ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ ಗುಡಸಲಮನಿ ಎನ್ನುವವರು ಧಾರವಾಡ ಗ್ರಾಮೀಣ ಠಾಣೆಯಲ್ಲಿ ಬಸವರಾಜ ಹೊರಟ್ಟಿ ಅವರನ್ನು ಐದನೇ ಆರೋಪಿಯನ್ನಾಗಿ ಎಫ್‌ಐಆರ್ ದಾಖಲಿಸಲಾಗಿತ್ತು.

ಗಲಾಟೆಗೆ ಹೊರಟ್ಟಿ ಕುಮ್ಮಕ್ಕು ನೀಡಿದ್ದಾರೆ ಎಂದು ಅವರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು. ಈ ಬಗ್ಗೆ ಮೊನ್ನೆಯಷ್ಟೇ ಮೇಲ್ಮನೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಧಾರವಾಡ ಎಸ್ಪಿ ಅವರನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದ್ದರು. ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಎರಡ್ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಇನ್ಸ್‌ಪೆಕ್ಟರ್ ಶ್ರೀಧರ ಸತಾರೆ ಅವರನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/03/2022 10:48 am

Cinque Terre

69.31 K

Cinque Terre

20

ಸಂಬಂಧಿತ ಸುದ್ದಿ