ಧಾರವಾಡ: ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷ ಬಿ. ವೀರಪ್ಪ ಅವರು ಇಂದು ಧಾರವಾಡದ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರಾಗೃಹದ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಕಾರಾಗೃಹದಲ್ಲಿನ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಅವರು, ಸ್ವತಃ ಅನ್ನ, ಸಾಂಬಾರು ಊಟ ಮೂಲಕ ಅಡುಗೆಯ ರುಚಿ ನೋಡಿದರು. ಅಲ್ಲದೇ ಕೈದಿಗಳಿಗಾಗಿ ತರಿಸಲಾಗಿದ್ದ ಮಟನ್ ಬಗ್ಗೆಯೂ ಪರಿಶೀಲನೆ ನಡೆಸಿ, ಜೈಲಿನಲ್ಲಿ ನೀಡುವ ಆಹಾರದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಅಲ್ಲದೇ ಜಾನುವಾರುಗಳ ವಿಭಾಗಕ್ಕೂ ಭೇಟಿ ನೀಡಿದ ನ್ಯಾಯಮೂರ್ತಿಗಳು, ಜಾನುವಾರುಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/05/2022 08:19 pm