ಕುಂದಗೋಳ: ಪಟ್ಟಣದಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದ ಅಂಗಡಿ ಮುಂಗಟ್ಟುಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣದ ಕೋಶದ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿ ದಂಡ ವಸೂಲಿ ಮಾಡಿದ್ದಾರೆ.
ಕುಂದಗೋಳ ಪಟ್ಟಣದ ಪ್ರಮುಖ ರಸ್ತೆಗೆ ಹೊಂದಿಕೊಂಡಿರುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಪ್ರದರ್ಶನ ಮಾಡಿ ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ಹಾಗೂ 18 ವರ್ಷಕ್ಕೂ ಸಣ್ಣ ಮಕ್ಕಳಿಗೆ ತಂಬಾಕು ಉತ್ಪನ್ನ ನೀಡದಂತೆ ಸಲಹೆ ನೀಡಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಮಾಡಿದ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ ಮಾಹಿತಿ ಫಲಕ ನೀಡಿದರು.
ಕುಂದಗೋಳ ಪಟ್ಟಣದಾದ್ಯಂತ ಸಂಚರಿಸಿದ ಅಧಿಕಾರಿಗಳು ಒಟ್ಟು 35 ಪ್ರಕರಣ ದಾಖಲಿಸಿಕೊಂಡು 4,400 ರೂಪಾಯಿ ದಂಡ ವಸೂಲಿ ಮಾಡಿದರು, ಈ ದಾಳಿಯಲ್ಲಿ ತಾಲೂಕು ಆಸ್ಪತ್ರೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಜಿಲ್ಲಾ ತುಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು ಭಾಗವಹಿಸಿದ್ದರು.
Kshetra Samachara
15/06/2022 08:31 pm