ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಗ್ನಿಪಥ ಯೋಜನೆ; 'ಪೊಲೀಸರಿಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಬೇಡಿ'

ಧಾರವಾಡ: ಕೇಂದ್ರ ಸರ್ಕಾರದ "ಅಗ್ನಿಪಥ" ಯೋಜನೆಯನ್ನು ವಿರೋಧಿಸಿ ಹಲವಾರು ಕಡೆ ಯುವಕರು ಪ್ರತಿಭಟನೆ ಮಾಡಿ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡಿರುವ ಘಟನೆಗಳು ನಡೆಯುತ್ತಿವೆ. ಇಂತಹ ಸಮಯದಲ್ಲಿ ಸಾರ್ವಜನಿಕರು ಪೊಲೀಸರಿಗೆ ಯಾವುದೇ ಕಾನೂನು ಕ್ರಮಗಳನ್ನು ಕೈಗೆತ್ತಿಕೊಳ್ಳುಲು ಅವಕಾಶ ನೀಡಬೇಡಿ ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕ ಪಿ.ಕೃಷ್ಣಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ "ಅಗ್ನಿಪಥ" ಯೋಜನೆಯನ್ನು ವಿರೋಧಿಸಿ ಹಲವಾರು ಯುವಕರು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡದೇ ಅಲ್ಲಲ್ಲಿ ಗಲಾಟೆ ಮಾಡಲು ಗುಂಪು ಸೇರಿ, ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಕಂಡುಬರುತ್ತಿವೆ. ಇಂತಹ ಸಂದರ್ಭಗಳಲ್ಲಿ ಪ್ರಕರಣಗಳನ್ನು ದಾಖಲಿಸುವಂತಹ, ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತಹ ಅವಕಾಶವನ್ನು ಪೊಲೀಸರಿಗೆ ನೀಡಬೇಡಿ. ಯಾವುದೇ ಕಾರಣಕ್ಕೂ ಯಾರೇ ಆಗಿರಲಿ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಗಲಾಟೆ ಮಾಡುವುದಾಗಲಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಹಿಸಬಾರದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

19/06/2022 09:58 pm

Cinque Terre

15.47 K

Cinque Terre

0

ಸಂಬಂಧಿತ ಸುದ್ದಿ