ಧಾರವಾಡ: ಭೂಸ್ವಾಧೀನಪಡಿಸಿಕೊಂಡು ರೈತ ಮಹಿಳೆಗೆ ಪರಿಹಾರ ಮೊತ್ತ ನೀಡದ ಹಿನ್ನೆಲೆಯಲ್ಲಿ ಧಾರವಾಡ ಉಪವಿಭಾಗಾಧಿಕಾರಿಗಳ ಸರ್ಕಾರಿ ವಾಹನವನ್ನು ನ್ಯಾಯಾಲಯದ ಆದೇಶದ ಮೇರೆಗೆ ಜಪ್ತಿ ಮಾಡಲಾಗಿದೆ.
ನವಲಗುಂದ ತಾಲೂಕಿನ ನಾಗವ್ವ ಲಲಿತಾ ಕೇರಿ ಎಂಬುವವರಿಗೆ ಸೇರಿದ್ದ 2 ಎಕರೆ 30 ಗುಂಟೆ ಜಮೀನನ್ನು ಉಪವಿಭಾಗಾಧಿಕಾರಿ ಕಚೇರಿ ಭೂಸ್ವಾಧೀನಪಡಿಸಿಕೊಂಡಿತ್ತು. ಆಗ ಆ ರೈತ ಮಹಿಳೆಗೆ ಕೇವಲ 35 ಲಕ್ಷ ಪರಿಹಾರ ಮಾತ್ರ ನೀಡಲಾಗಿತ್ತು.
ಈ ಕಡಿಮೆ ಪರಿಹಾರ ನೀಡಿದ್ದನ್ನು ಪ್ರಶ್ನಿಸಿ ಜಮೀನು ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯ ಕೂಡ ಜಮೀನು ಮಾಲೀಕರಿಗೆ 1 ಕೋಟಿ 73 ಲಕ್ಷ ಪರಿಹಾರ ನೀಡಬೇಕು ಎಂದು ಆದೇಶ ಹೊರಡಿಸಿತ್ತು. ನ್ಯಾಯಾಲಯದ ಆದೇಶವಿದ್ದರೂ ಜಮೀನು ಮಾಲೀಕರಿಗೆ 9 ತಿಂಗಳು ಕಳೆದರೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ಧಾರವಾಡದ ಎರಡನೇ ಅಧಿಕ ಜಿಲ್ಲಾ ನ್ಯಾಯಾಲಯವು ಉಪವಿಭಾಗಧಿಕಾರಿಗಳ ಸರ್ಕಾರಿ ವಾಹನ ಜಪ್ತಿ ಮಾಡುವಂತೆ ಆದೇಶ ಹೊರಡಿಸಿತ್ತು.
ನ್ಯಾಯಾಲಯದ ಆದೇಶದಂತೆ ಕೋರ್ಟ್ ಸಿಬ್ಬಂದಿ ಶುಕ್ರವಾರ ಉಪವಿಭಾಗಾಧಿಕಾರಿಗಳ ವಾಹನವನ್ನು ಜಪ್ತಿ ಮಾಡಿದ್ದಾರೆ.
Kshetra Samachara
24/06/2022 07:37 pm