ಧಾರವಾಡ: ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಬಗರ್ ಹುಕುಂ ಸಾಗುವಳಿದಾರರ ಹೋರಾಟ ಸಮಿತಿಯವರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಲಘಟಗಿ ತಾಲೂಕಿನ ಚಳಮಟ್ಟಿ, ಕಾಡನಕೊಪ್ಪ ಗ್ರಾಮಗಳ ಸರಹದ್ದಿನಲ್ಲಿ ಕೆಳಸ್ಥರದ ಸಮುದಾಯಗಳ ಬಗರ್ ಹುಕುಂ ಸಾಗುವಳಿದಾರರು ಹಾಗೂ ಬಡ ರೈತರು ಸುಮಾರು 30 ವರ್ಷಗಳಿಂದ ಗ್ರಾಮಕ್ಕೆ ಹೊಂದಿಕೊಂಡಿರುವ ಕಂದಾಯ ಭೂಮಿಯನ್ನು ಉಳುಮೆ ಮಾಡುತ್ತ ಬಂದಿದ್ದಾರೆ. ಈಗ ಸಾಗುವಳಿ ಕೈಬಿಡಿ ಎಂದು ಅವರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಈ ಹಿಂದಿನ ಸರ್ಕಾರ ಉಳುಮೆಗೆ ಅವಕಾಶ ನೀಡಿತ್ತು. ಆದರೆ, ಈಗ ಅವರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಈ ಜನ ಇದೇ ಭೂಮಿ ನಂಬಿ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ಅಲ್ಲಿನ ಜನರನ್ನು ಒಕ್ಕೆಲಬ್ಬಿಸುವ ಕೆಲಸವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
Kshetra Samachara
20/07/2022 03:56 pm